Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:5
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.


ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;


ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.


ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.


ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು