Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:6 - ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:6
29 ತಿಳಿವುಗಳ ಹೋಲಿಕೆ  

ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.


ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.


ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು