Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:13 - ಕನ್ನಡ ಸಮಕಾಲಿಕ ಅನುವಾದ

13 ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:13
9 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.


ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.


“ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು