Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದುಷ್ಟರಾದರೋ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗೆ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:20
15 ತಿಳಿವುಗಳ ಹೋಲಿಕೆ  

ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.


ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, ನಿಮ್ಮ ಶತ್ರುಗಳು ನಾಶವಾಗುವರು. ಕೇಡು ಮಾಡುವವರೆಲ್ಲರು ಚದರಿಹೋಗುವರು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು