ಕೀರ್ತನೆಗಳು 37:3 - ಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ. ಅಧ್ಯಾಯವನ್ನು ನೋಡಿ |
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.