Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:30 - ಕನ್ನಡ ಸಮಕಾಲಿಕ ಅನುವಾದ

30 ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:30
12 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.


ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.


ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು