Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:34 - ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:34
23 ತಿಳಿವುಗಳ ಹೋಲಿಕೆ  

ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.


ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.


ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು