Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:4
14 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.


ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು