Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:1
11 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.


ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ. ನಿಮ್ಮ ಅಲೆಗಳಿಂದೆಲ್ಲಾ ನನ್ನನ್ನು ಮುಳುಗಿಸಿದ್ದೀರಿ.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು