Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:6 - ಕನ್ನಡ ಸಮಕಾಲಿಕ ಅನುವಾದ

6 “ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:6
31 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


“ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.


ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು.


ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.


ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.


“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.


ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.


ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು