Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:2 - ಕನ್ನಡ ಸಮಕಾಲಿಕ ಅನುವಾದ

2 ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:2
29 ತಿಳಿವುಗಳ ಹೋಲಿಕೆ  

“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.


ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.


ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.


ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.


ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.


ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ.


ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.


ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು