Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:12 - ಕನ್ನಡ ಸಮಕಾಲಿಕ ಅನುವಾದ

12 ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:12
13 ತಿಳಿವುಗಳ ಹೋಲಿಕೆ  

ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.


ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.


ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.


ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.


ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು