ಕೀರ್ತನೆಗಳು 40:5 - ಕನ್ನಡ ಸಮಕಾಲಿಕ ಅನುವಾದ5 ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿ |