Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:10
13 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.


ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು