Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ವಿರೋಧಿಗಳೆನ್ನ ಮೇಲೆ ಜಯಗೊಳ್ಳದಂದು I ಅರಿತುಕೊಳ್ವೆನು ನಿನ್ನೊಲುಮೆ ನನಗಿದೆಯೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:11
9 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.


ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.


“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು