Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:2 - ಕನ್ನಡ ಸಮಕಾಲಿಕ ಅನುವಾದ

2 ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:2
20 ತಿಳಿವುಗಳ ಹೋಲಿಕೆ  

ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.


ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


“ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.


ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು