ಕೀರ್ತನೆಗಳು 42:4 - ಕನ್ನಡ ಸಮಕಾಲಿಕ ಅನುವಾದ4 ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.