Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:3 - ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:3
26 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.


ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.


ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.


ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!


ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.


ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.


ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.


ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.


ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು