Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:2 - ಕನ್ನಡ ಸಮಕಾಲಿಕ ಅನುವಾದ

2 ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:2
27 ತಿಳಿವುಗಳ ಹೋಲಿಕೆ  

ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.


ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.


ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.


ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು