Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:21 - ಕನ್ನಡ ಸಮಕಾಲಿಕ ಅನುವಾದ

21 ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೃದಯರಹಸ್ಯಗಳನ್ನು ಬಲ್ಲವನಾದ ದೇವರು ವಿಚಾರಿಸುತ್ತಿರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:21
12 ತಿಳಿವುಗಳ ಹೋಲಿಕೆ  

“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು