Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:24 - ಕನ್ನಡ ಸಮಕಾಲಿಕ ಅನುವಾದ

24 ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:24
14 ತಿಳಿವುಗಳ ಹೋಲಿಕೆ  

ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ.


ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ.


“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.


ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?


ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು