ಕೀರ್ತನೆಗಳು 44:3 - ಕನ್ನಡ ಸಮಕಾಲಿಕ ಅನುವಾದ3 ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು. ಅಧ್ಯಾಯವನ್ನು ನೋಡಿ |