ಕೀರ್ತನೆಗಳು 45:1 - ಕನ್ನಡ ಸಮಕಾಲಿಕ ಅನುವಾದ1 ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿ |