Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:3 - ಕನ್ನಡ ಸಮಕಾಲಿಕ ಅನುವಾದ

3 ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:3
22 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.


ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.


ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು,


ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,


ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು