ಕೀರ್ತನೆಗಳು 45:7 - ಕನ್ನಡ ಸಮಕಾಲಿಕ ಅನುವಾದ7 ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |