ಕೀರ್ತನೆಗಳು 45:8 - ಕನ್ನಡ ಸಮಕಾಲಿಕ ಅನುವಾದ8 ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು. ಅಧ್ಯಾಯವನ್ನು ನೋಡಿ |