Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:10 - ಕನ್ನಡ ಸಮಕಾಲಿಕ ಅನುವಾದ

10 “ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:10
26 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


“ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.


ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.


ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ


ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.


ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು