Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:8 - ಕನ್ನಡ ಸಮಕಾಲಿಕ ಅನುವಾದ

8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:8
18 ತಿಳಿವುಗಳ ಹೋಲಿಕೆ  

ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು