ಕೀರ್ತನೆಗಳು 47:9 - ಕನ್ನಡ ಸಮಕಾಲಿಕ ಅನುವಾದ9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ! ಅಧ್ಯಾಯವನ್ನು ನೋಡಿ |