Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:3 - ಕನ್ನಡ ಸಮಕಾಲಿಕ ಅನುವಾದ

3 ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ಅದರ ಕೊತ್ತಲುಗಳಲ್ಲಿ ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:3
14 ತಿಳಿವುಗಳ ಹೋಲಿಕೆ  

ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯೆಹೋವ ದೇವರಿಗೆ ಸ್ತೋತ್ರ.


ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು