Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:2 - ಕನ್ನಡ ಸಮಕಾಲಿಕ ಅನುವಾದ

2 ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಗಳೇ ಜನಾಧಿಪತಿಗಳೇ, ಬಡವರೇ ಬಲ್ಲಿದರೇ, ನೀವೆಲ್ಲರೂ ಒಂದಾಗಿ ಬಂದು ಆಲೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಾಮಾನ್ಯ ಜನರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:2
10 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು