Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:11
18 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.


ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ; ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ಯೆಹೋವ ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.


ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.


ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.


ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.


ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು