Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:18 - ಕನ್ನಡ ಸಮಕಾಲಿಕ ಅನುವಾದ

18 ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:18
14 ತಿಳಿವುಗಳ ಹೋಲಿಕೆ  

ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು