Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:18 - ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:18
23 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.


ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು