Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:9
9 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ, ಸಾಬೂನಿನಿಂದ ನನ್ನ ಕೈಗಳನ್ನು ತೊಳೆದುಕೊಂಡರೂ,


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು