ಕೀರ್ತನೆಗಳು 52:5 - ಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು. ಅಧ್ಯಾಯವನ್ನು ನೋಡಿ |