Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:6 - ಕನ್ನಡ ಸಮಕಾಲಿಕ ಅನುವಾದ

6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:6
18 ತಿಳಿವುಗಳ ಹೋಲಿಕೆ  

ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.


ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು