Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:1 - ಕನ್ನಡ ಸಮಕಾಲಿಕ ಅನುವಾದ

1 ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:1
34 ತಿಳಿವುಗಳ ಹೋಲಿಕೆ  

ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ. ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.


“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,


ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.


ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ


ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು