ಕೀರ್ತನೆಗಳು 59:16 - ಕನ್ನಡ ಸಮಕಾಲಿಕ ಅನುವಾದ16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ. ಅಧ್ಯಾಯವನ್ನು ನೋಡಿ |