ಕೀರ್ತನೆಗಳು 60:1 - ಕನ್ನಡ ಸಮಕಾಲಿಕ ಅನುವಾದ1 ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.