Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:4 - ಕನ್ನಡ ಸಮಕಾಲಿಕ ಅನುವಾದ

4 ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:4
14 ತಿಳಿವುಗಳ ಹೋಲಿಕೆ  

ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.


“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.


ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.


ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.


ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು.


ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.


ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು