ಕೀರ್ತನೆಗಳು 64:5 - ಕನ್ನಡ ಸಮಕಾಲಿಕ ಅನುವಾದ5 ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.