ಕೀರ್ತನೆಗಳು 65:5 - ಕನ್ನಡ ಸಮಕಾಲಿಕ ಅನುವಾದ5 ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ. ಅಧ್ಯಾಯವನ್ನು ನೋಡಿ |