ಕೀರ್ತನೆಗಳು 65:7 - ಕನ್ನಡ ಸಮಕಾಲಿಕ ಅನುವಾದ7 ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ. ಅಧ್ಯಾಯವನ್ನು ನೋಡಿ |