ಕೀರ್ತನೆಗಳು 65:9 - ಕನ್ನಡ ಸಮಕಾಲಿಕ ಅನುವಾದ9 ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ. ಅಧ್ಯಾಯವನ್ನು ನೋಡಿ |