Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:14 - ಕನ್ನಡ ಸಮಕಾಲಿಕ ಅನುವಾದ

14 ನನ್ನ ಇಕ್ಕಟ್ಟಿನಲ್ಲಿ ತುಟಿ ಬಿಚ್ಚಿ ನನ್ನ ಬಾಯಿಂದ ನುಡಿದ ನನ್ನ ಹರಕೆಗಳನ್ನು ನಾನು ನಿಮಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಬಿಚ್ಚಿ ಬಾಯಿ ಉಚ್ಚರಿಸಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:14
9 ತಿಳಿವುಗಳ ಹೋಲಿಕೆ  

ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


“ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.


ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.


ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.


ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು