Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:15 - ಕನ್ನಡ ಸಮಕಾಲಿಕ ಅನುವಾದ

15 ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ ಸುವಾಸನೆಯನ್ನುಂಟುಮಾಡುವೆನು; ಯಜ್ಞಕ್ಕಾಗಿ ಹೋತಹೋರಿಗಳನ್ನು ತರುವೆನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:15
8 ತಿಳಿವುಗಳ ಹೋಲಿಕೆ  

ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.


ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.


ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.


ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,


ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು