Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನು ನುಡಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀ ಸಮೂಹವು ಎಷ್ಟೋ ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:11
10 ತಿಳಿವುಗಳ ಹೋಲಿಕೆ  

ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು.


ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.


ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ.


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು