Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:18 - ಕನ್ನಡ ಸಮಕಾಲಿಕ ಅನುವಾದ

18 ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:18
47 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.


ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು