Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:28 - ಕನ್ನಡ ಸಮಕಾಲಿಕ ಅನುವಾದ

28 ದೇವರೇ, ನಿಮ್ಮ ಶಕ್ತಿಯನ್ನು ಪ್ರಕಟಿಸಿರಿ, ಮೊದಲು ಮಾಡಿದಂತೆಯೇ ಈಗಲೂ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರೇ, ನಿನ್ನ ಪ್ರತಾಪವನ್ನು ತೋರ್ಪಡಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡಿಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರೇ, ನಿನ್ನ ಬಲವನ್ನು ನಮಗೆ ತೋರಿಸು! ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:28
13 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ. ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.


ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.


ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು